ಬೆಳಗಾವಿ : ಬೆಳಗಾವಿ ತಾಲೂಕು10 ನೇ ಕನ್ನಡ ಸಾಹಿತ್ಯ ಸಮ್ಮೇಳನ ಜ. 27 ರಂದು ಕಾಕತಿಯ ಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಹಿರಿಯ ಮಹಿಳಾ ಸಾಹಿತಿ ಶೈಲಜಾ ಭಿಂಗೆ ಅವರು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ರಂಗಸೃಷ್ಟಿ ತಂಡದ ಕಾರ್ಯಕಾರಿ ಸಮಿತಿ ಸದಸ್ಯರಾಗಿರುವ ಶೈಲಜಾ ಭಿಂಗೆಯವರನ್ನು ರಂಗಸೃಷ್ಟಿಯ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಶೈಲಜಾ ಭಿಂಗೆ ಅವರು ಕಳೆದ 40 ವರ್ಷಗಳಿಗಿಂತ ಹೆಚ್ಚು ಸಮಯದಿಂದ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾಗಿ, ಸಾಹಿತಿಯಾಗಿ, ಸಾಹಿತ್ಯ ಸಮ್ಮೇಳನಗಳ ಸಂಘಟನೆಯಲ್ಲಿ ಸಕ್ರೀಯವಾಗಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿದ್ದಾರೆ.