ಬೆಂಗಳೂರು: ಉತ್ತರ ಕರ್ನಾಟಕದ ಜಿಲ್ಲೆಗಳಾದ
ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 1.30ರವರೆಗೆ ನಿಗದಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬೇಸಿಗೆ ತಾಪಮಾನ ಗಣನೀಯವಾಗಿ ಏರಿಕೆಯಾಗಿದ್ದು, ಸರ್ಕಾರಿ ನೌಕರರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬದಲಾಯಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿತು.
ಸಮಯದಲ್ಲಿ ಬದಲಾವಣೆಯಾದರೂ, ಸಾರ್ವಜನಿಕ ಕೆಲಸ ಕಾರ್ಯಗಳಿಗೆ ತೊಂದರೆಯಾಗದಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.