ಬೆಳಗಾವಿ :
ಜಿಲ್ಲಾ ಪಂಚಾಯತ್ ಬೆಳಗಾವಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವಿಭಾಗ ಬೆಳಗಾವಿ ಅನುಷ್ಠಾನ ಬೆಂಬಲ ಸಂಸ್ಥೆಯಯವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕಾರ್ಯಾಚರಣೆ ಮತ್ತು ನಿರ್ವಹಣೆ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಬೆಳಗಾವಿ ಅವರ ಆದೇಶದ ಮೇರೆಗೆ ಕಿತ್ತೂರು ತಾಲೂಕಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಬಗ್ಗೆ ಕಾರ್ಯಾಚರಣೆ ಮತ್ತು ನಿರ್ವಹಣೆ, ನೀರಿನ ಗುಣಮಟ್ಟ ಪರೀಕ್ಷೆಯ ತರಬೇತಿಯನ್ನು ಏರ್ಪಡಿಸಲಾಯಿತು.
ಕಾರ್ಯಗಾರದ ಅಧ್ಯಕ್ಷರ ಸ್ಥಾನವನ್ನು ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರವೀಣ ಮಠಪತಿ ವಹಿಸಿದ್ದರು.
ತಾಲೂಕ ಪಂಚಾಯತಿಯ ಸಹಾಯಕ ನಿರ್ದೇಶಕರು, ನರೇಗಾ ಕಿತ್ತೂರು ಸಹಾಯಕ ನಿರ್ದೇಶಕರು, ತಾಲೂಕ ಪಂಚಾಯಿತಿಯ ಲೆಕ್ಕಾಧಿಕಾರಿಗಳು, ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ವಾಟರ್ ಮ್ಯಾನ್ಗಳು ಮತ್ತು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಸಿಬ್ಬಂದಿಗಳು, ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳು ಭಾಗವಹಿಸಿ ಕಾರ್ಯಗಾರವನ್ನು ಯಶಸ್ವಿಗೋಳಿಸಿದರು.